ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಗಾಟನೆ

‘ವಿದ್ಯಾರ್ಥಿಗಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಗುರುತಿಸಿ, ಬೆಳಕಿಗೆ ತರಲೆತ್ನಿಸುವುದು ಬೋಧನೆಯ ಪರಮಗುರಿಯಾಗಿದೆ’ ಎಂದು ಕಾಸರಗೋಡು ಸರಕಾರಿ ಕಾಲೇಜಿನ ಕನ್ನಡ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಧಾಕೃಷ್ಣ ಬೆಳ್ಳೂರು ಹೇಳಿದರು. ವಿವೇಕಾನಂದ ಪ. ಪೂ. ಕಾಲೇಜಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಅವರು ‘ಕೇವಲ ಅಂಕಗಳಿಕೆ ಮಾತ್ರ ಪ್ರತಿಭೆಯಲ್ಲ. ಅಂತರಂಗದ ವಿಕಸನವೇ ಪ್ರತಿಭೆ , ಸಾಹಿತ್ಯ , ಸಂಗೀತ, ಲಲಿತಕಲೆಗಳ ಮೂಲಕ ವ್ಯಕ್ತಿತ್ವದ ವಿಕಸನವಾಗುತ್ತದೆ. ಈ ನಿಟ್ಟಿನಲ್ಲಿ ವಿವೇಕಾನಂದ ಪ.ಪೂ ಕಾಲೇಜು ಒದಗಿಸಿಕೊಡುವ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳಬೇಕೆಂದು ಅವರು ಹೇಳಿದರು.

ವಿದ್ಯಾರ್ಥಿ ಸಂಘದ ಜೊತೆಗೆ, ಲಲಿತಕಲಾ ಸಂಘ, ಕಲಾಸಂಘ, ವಾಣಿಜ್ಯಸಂಘ, ವಿಜ್ಞಾನಸಂಘ, ಚಿಗುರು ಭಿತ್ತಿ ಪತ್ರಿಕೆಗಳ ಕಾರ್ಯಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಥಮ ಪ. ಪೂ. ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಸಂಚಾಲಕರಾದ ಎಂ.ಟಿ. ಜಯರಾಮ ಭಟ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾದ ಜೀವನ್‌ದಾಸ್ ಅವರು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಸಾದ್ ಶಾನುಭಾಗ್ ಪ್ರಸ್ತಾವನೆಗೈದರು. ಇನ್ನೋರ್ವ ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಶ್ರೀಮತಿ ನಳಿನ ಕುಮಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನುಪಮ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ವಿನೂತ್ ಶೆಟ್ಟಿ ಅತಿಥಿಗಳ ಪರಿಚಯ ಮಾಡಿದರು. ಜೊತೆಕಾರ್ಯದರ್ಶಿ ಪ್ರೇಕ್ಷಾ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ಸೌಮ್ಯ. ಎನ್. ಕಾರ್ಯಕ್ರಮ ನಿರೂಪಿಸಿದರು.

Highslide for Wordpress Plugin