ಕಾಲೇಜು ವಾರ್ಷಿಕೋತ್ಸವ 2017

ಅನುಭವ, ಛಲ, ಸತತ ಪ್ರಯತ್ನಗಳ ಮೂಲಕ ಗುರಿಯನ್ನು ಸಾಧಿಸಬಹುದು. ಅವಮಾನ, ಅನುಮಾನ, ಸಮ್ಮಾನಗಳಿಲ್ಲದೆ ಸಾಧನೆ ಸಾಧ್ಯವಿಲ್ಲ. ಜೀವನಪ್ರೀತಿಯಿಂದ ಅಂತರಂಗ ಗಟ್ಟಿಗೊಳ್ಳುತ್ತದೆ ಎಂದು ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ವಿಜೇತ ಪತ್ರಕರ್ತ, ಬಿ ಟಿ.ವಿ ಕನ್ನಡ ವಾಹಿನಿಯ ಸೀನಿಯರ್ ನ್ಯೂಸ್ ಪ್ರಸೆಂಟರ್ ಶ್ರೀ ಶೇಷಕೃಷ್ಣ ಎನ್ ಹೇಳಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಮನಸ್ಸಿನ ಧೀಶಕ್ತಿಯನ್ನು ಎಂದಿಗೂ ತ್ಯಜಿಸಬಾರದು. ಒದಗಿ ಬರುವ ಅವಕಾಶಗಳನ್ನು ಕೈಬಿಡಬಾರದು. ಜೀವನದಲ್ಲಿ ಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಸಾಗಿದಾಗ ಬದುಕಿಗೆ ಅರ್ಥ ಬರುತ್ತದೆ. ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮತ್ತು ಆತ್ಮವಿಶ್ವಾಸ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು.

college day 2017 (1)

college day 2017 (2)

ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ವನಮಾಲಿ ಭಟ್ ಮಾತನಾಡಿ ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಬಾಳಿದರೆ ಗೌರವ ಸಿಗುತ್ತದೆ. ಗೌರವ ಹುಡುಕಿಕೊಂಡು ಬರುವ ರೀತಿಯಲ್ಲಿ ನಾವು ಬೆಳೆಯಬೇಕು ಎಂದು ಅಭಿಪ್ರಾಯಪಟ್ಟರು.

ಮುಖ್ಯ ಅಭ್ಯಾಗತರಾದ ಕಲ್ಲಡ್ಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶ್ರೀ ಕೃಷ್ಣಪ್ರಸಾದ ಕೆ.ಎನ್ ಮಾತನಾಡಿ ಶಿಕ್ಷಣದಲ್ಲಿ ಭಾರತೀಯತೆಯನ್ನು ಮೈಗೂಡಿಸಿಕೊಳ್ಳಬೇಕು. ಆತ್ಮಪ್ರಜ್ಞೆ, ಅಂತಸತ್ವಗಳನ್ನು ರೂಢಿಸಿಕೊಳ್ಳಬೇಕು. ಶಿಸ್ತಿನ ವ್ಯಾಸಂಗದೊಂದಿಗೆ ದೃಢತೆಯನ್ನು ಮೈಗೂಡಿಸಿಕೊಂಡು ಪ್ರಗತಿಪಥದತ್ತ ಸಾಗಬೇಕು ಎಂದು ನುಡಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ. ಯಂ ಕೃಷ್ಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

college day 2017 (5)

college day 2017

college day 2017 (3)

college day 2017 (4)

ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು. ಪಠ್ಯ-ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಶಿವರಾಮ ಭಟ್ ಶುಭಹಾರೈಸಿದರು.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವೀಂದ್ರ ಪಿ, ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಜಯನಾಥ. ವಿ. ಶೆಟ್ಟಿ, ಕಾರ್ಯದರ್ಶಿ ನಿಖಿಲ್ ರಾಜ್ ಹೆಗಡೆ, ಸಹಕಾರ್ಯದರ್ಶಿ ಮಾಧುರಿ ಶರ್ಮ ಉಪಸ್ಥಿತರಿದ್ದರು.

ವಾಣಿಜ್ಯ ವಿಭಾಗದ ಉಪನ್ಯಾಸಕಿ ಅಕ್ಷತಾ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪರಮೇಶ್ವರ ಶರ್ಮ ಸ್ವಾಗತಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಶ್ರೀಮತಿ ದಯಾಮಣಿ ವಂದಿಸಿದರು. ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

Highslide for Wordpress Plugin