ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಸಮಾರೋಪ ಸಮಾರಂಭ

ಕಠಿಣ ಪರಿಶ್ರಮ ಮತ್ತು ಕ್ರೀಡಾಸ್ಫೂರ್ತಿಯಿಂದ ಮಾತ್ರ ಕ್ರೀಡೆಯಲ್ಲಿ ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ತಿಳಿಸಿದರು.

DSC_0988

ಅವರು ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷೀಯ ಮಾತುಗಳನ್ನಾಡಿ ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯ ಮುಂದಿನ ಹಂತದ ಸ್ಪರ್ಧೆಗಳಿಗೆ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಂತೀಯ ಕಾರ್ಯದರ್ಶಿ ಶ್ರೀ ವಸಂತ ಮಾಧವ ಗೆದ್ದ ಕ್ರೀಡಾಪಟುಗಳನ್ನು ಹಾರೈಸಿದರು.

ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರವಿ ಮುಂಗ್ಲಿಮನೆ, ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಉಪಾಧ್ಯಕ್ಷರಾದ ಶ್ರೀ ವೆಂಕಟರಮಣ ರಾವ್ ಇವರು ಉಪಸ್ಥಿತರಿದ್ದರು.

ಒಟ್ಟು 4 ವರ್ಗದಲ್ಲಿ ಕ್ರೀಡೆಯನ್ನು ಆಯೋಜಿಸಲಾಗಿತ್ತು. ಶಿಶು ವರ್ಗದ ಬಾಲಕರ ವಿಭಾಗದಲ್ಲಿ ಶ್ರೀರಾಮ ಪ್ರಾಥಮಿಕ ಶಾಲೆ,ಕಲ್ಲಡ್ಕ ಹಾಗೂ ಬಾಲಕಿಯರ ವಿಭಾಗದಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ ಲಭಿಸಿದೆ.

ಬಾಲ ವರ್ಗ ಮತ್ತು ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಹಾಗೂ ಬಾಲಕಿಯರ ವಿಭಾಗದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ ಲಭಿಸಿದೆ.

ಹಾಗೆಯೇ ತರುಣ ವರ್ಗದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಕಾರ್ಯಕ್ರಮವನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪರಮೇಶ್ವರ ಶರ್ಮ ನಿರೂಪಿಸಿ ವಂದಿಸಿದರು.

Highslide for Wordpress Plugin