ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ಬೆಟ್ಟಂಪಾಡಿ ಪ್ರಿಯದರ್ಶಿನಿ ಪ್ರೌಢಶಾಲೆಯಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಪ್ರಾಯೋಜಿತ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ತಂಡವು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು. ಬಾಲಕರ ವಿಭಾಗದಲ್ಲಿ 8 ಚಿನ್ನ, 9 ಬೆಳ್ಳಿ ಮತ್ತು 5 ಕಂಚು ಹಾಗೂ ಬಾಲಕಿಯರ ವಿಭಾಗದಲ್ಲಿ 10 ಚಿನ್ನ, 4 ಬೆಳ್ಳಿ ಮತ್ತು 3 ಕಂಚು ಪಡೆದುದರ ಮೂಲಕ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ದ್ವಿತೀಯ ವಿಜ್ಙಾನ ವಿಭಾಗದ ಪ್ರತೀಕ್ ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದರು. ಈ ಮೂಲಕ ಅಗಸ್ಟ್ 16ರಂದು ಮಂಗಳೂರಿನ ಶಾರದ ವಿದ್ಯಾಲಯದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದ್ದಾರೆ.

2

1

Highslide for Wordpress Plugin