ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿಗೆ ಪ್ರಥಮ ಸ್ಥಾನ

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಎಸ್. ವಿ.ಎಸ್ ಪದವಿ ಪೂರ್ವ ಕಾಲೇಜು, ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ| ರವಿಶಂಕರ್ ಮತ್ತು ಡಾ| ಜ್ಯೋತಿ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

sports

Highslide for Wordpress Plugin