ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ

ದಕ್ಷಿಣಕನ್ನಡ ಪದವಿಪೂರ್ವ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ. 5 ವಿದ್ಯಾರ್ಥಿನಿಯರು ಮತ್ತು 11 ವಿದ್ಯಾರ್ಥಿಗಳು ಕಾಲೇಜನ್ನು ಪ್ರತಿನಿಧಿಸಿ ಒಟ್ಟು 17 ಚಿನ್ನ, 12 ಬೆಳ್ಳಿ ಮತ್ತು 1 ಕಂಚಿನ ಪದಕವನ್ನು ಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

IMG-20161111-WA0051

IMG-20161111-WA0052

ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ ಕೆ. ಇವರು 3 ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಗಳಿಸಿರುತ್ತಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯು ಮೂಡಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನಲ್ಲಿ ಇದೇ ತಿಂಗಳ 16 ಮತ್ತು 17 ರಂದು ನಡೆಯಲಿದೆ.

Highslide for Wordpress Plugin