ತಾಲೂಕು ಮಟ್ಟದ ಖೋ-ಖೋ ಪಂದ್ಯಾಟದಲ್ಲಿ ಕಾಲೇಜಿಗೆ ದ್ವಿತೀಯ ಸ್ಥಾನ

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸೀತಾ ರಾಘವ ಪದವಿ ಪೂರ್ವ ಕಾಲೇಜು, ಪೆರ್ನಾಜೆ ಇದರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ| ರವಿಶಂಕರ್ ಮತ್ತು ಡಾ| ಜ್ಯೋತಿ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

sports4

Highslide for Wordpress Plugin