ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವು ನಡೆಯಿತು. ಸರಸ್ವತಿ ಪೂಜೆಯನ್ನು ನಡೆಸಿ ವಿದ್ಯಾರ್ಥಿಗಳಿಗೆ ಶ್ರೀರಕ್ಷೆಯನ್ನು ನೀಡುವುದರ ಮೂಲಕ ವಿಶಿಷ್ಠ ರೀತಿಯಲ್ಲಿ ಬೀಳ್ಕೊಡುಗೆ ನೀಡಲಾಯಿತು.

ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಡಾ. ಸುಲೇಖಾ ವರದರಾಜ್ ಭಾವನಾತ್ಮಕ ಪ್ರಪಂಚವನ್ನು ಬೆಳೆಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳು ಜೀವನವನ್ನು ಸುಂದರವಾಗಿ ಇರಿಸಿಕೊಳ್ಳಬೇಕು. ಅಂಕಗಳ ಜೊತೆಗೆ ಜೀವನಮೌಲ್ಯಗಳು ಅತ್ಯಗತ್ಯ. ಕಠಿಣ ಪರಿಸ್ಥಿತಿಯನ್ನು ಎದುರಿಸುವ ಛಲವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

1

ಕಾಲೇಜಿನ ಉಪಪ್ರಾಂಶುಪಾಲರಾದ ಪರಮೇಶ್ವರ ಶರ್ಮ ಮಾತನಾಡಿ ವಿದ್ಯಾರ್ಥಿಗಳು ಮತ್ತು ವಿದ್ಯಾಲಯದ ಸಂಬಂಧ ಮತ್ತು ಕೊಂಡಿ ಎಂದಿಗೂ ಕಳಚಬಾರದು. ಅದು ಮುಂದುವರಿಯುತ್ತಾ ಸಾಗಬೇಕು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸಮಾಜದ ಆಧಾರ ಸ್ತಂಭವಾಗಬೇಕು ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ರವೀಂದ್ರ, ಸಂಚಾಲಕ ಸಂತೋಷ್, ಸದಸ್ಯರಾದ ರವಿ ಮುಂಗ್ಲಿಮನೆ, ವತ್ಸಲಾರಾಜ್ಙಿ, ಶಿಕ್ಷಕ-ರಕ್ಷಕ ಸಂಘದ ಸದಸ್ಯ ಶಿವರಾಮ ಭಟ್ , ಹೆತ್ತವರು, ಅಧ್ಯಾಪಕ ವೃಂದದವರು ಭಾಗವಹಿಸಿದ್ದರು. ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ನೇತೃತ್ವದಲ್ಲಿ ಪೂಜವಿಧಿಗಳು ನೇರವೇರಿದವು. ಮಹಾಪೂಜೆಯ ನಂತರ ವಿದ್ಯಾರ್ಥಿಗಳಿಗೆ ಸರಸ್ವತಿ ಮಂತ್ರವನ್ನು ಭೋದಿಸಿ ಅದರ ಮಹತ್ವವನ್ನು ವಿವರಿಸಿದರು.

Highslide for Wordpress Plugin