ಫ್ಯಾಕುಲಾ -2017 ’ರಂಗ್’ ಕಾರ್ಯಕ್ರಮ: ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಅಂತರ್ ಕಾಲೇಜು ನಿರ್ವಹಣಾ ಸ್ಪರ್ಧೋತ್ಸವ ಫ್ಯಾಕುಲಾ 2017 ’ರಂಗ್’ ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡವು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ರಸಪ್ರಶ್ನೆ ಸ್ಫರ್ಧೆಯಲ್ಲಿ ಪ್ರಥಮ ಪಿಯುಸಿಯ ಹೃಷಿಕೇಶ್ ಆರ್ ಭಟ್ ಮತ್ತು ಸ್ಕಂದ ಎನ್. ಭಟ್ ಇವರ ತಂಡವು ಪ್ರಥಮ ಬಹುಮಾನವನ್ನು ಪಡೆದುಕೊಂಡಿದೆ. ಹಾಗೆಯೇ ಟ್ರೇಶರ್ ಹಂಟ್ ಸ್ಫರ್ಧೆಯಲ್ಲಿ ದ್ವಿತೀಯ ಪಿಯುಸಿಯ ಸುಕೇಶ್ ಶೆಟ್ಟಿ ಮತ್ತು ರಿತಿಕ್ ಇವರ ತಂಡವು ಪ್ರಥಮ ಬಹುಮಾನವನ್ನು ಪಡೆದುಕೊಂಡಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

DSC_0004

Highslide for Wordpress Plugin