ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟ – ಕಾಲೇಜಿಗೆ ದ್ವಿತೀಯ ಸ್ಥಾನ

Rakshithaಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಬ್ರಹ್ಮಾವರದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ದ್ವಿತೀಯಸ್ಥಾನವನ್ನು ಪಡೆದಿದ್ದಾರೆ. ಈ ಮೂಲಕ SGFI ನಡೆಸುವ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ಅಜಯನಗರದ ಈಶ್ವರ ಗೌಡ ಮತ್ತು ಶ್ರೀಮತಿ ದೇವಕಿ ದಂಪತಿಗಳ ಪುತ್ರಿ.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ| ರವಿಶಂಕರ್‌ ಇವರ ನೇತೃತ್ವದಲ್ಲಿ ಇವರು ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

Highslide for Wordpress Plugin