ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಬೇಕಾಗಿದೆ – ಡಾ ಧನಂಜಯ ಕುಂಬ್ಳೆ

ಯುವ ನಾಯಕತ್ವ ನಮ್ಮ ದೇಶದ ಅವಶ್ಯಕತೆಯಾಗಿದ್ದು, ವಿದ್ಯಾರ್ಥಿ ಸಂಘಗಳು ಇಂತಹ ಯುವ ನಾಯಕರುಗಳನ್ನು ರೂಪಿಸುವಲ್ಲಿ ಮಹತ್ವದ ಪಾತ್ರವಹಿಸುತ್ತದೆ. ವಿದ್ಯಾರ್ತಿಗಳನ್ನು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವುದರಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳು ಸಹಾಯಕವಾಗಿದೆ ಎಂದು ಆಳ್ವಾಸ್ ಕಾಲೇಜಿನ ಉಪನ್ಯಸಕ ಡಾ. ಧನಂಜಯ ಕುಂಬ್ಳೆ ನುಡಿದರು. ಅವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನೆಯನ್ನು ಮಾಡಿ ಮಾತನಾಡುತ್ತಿದ್ದರು.

ನಮ್ಮ ದೇಶದಲ್ಲಿ ಯುವಶಕ್ತಿ ಅತೀ ದೊಡ್ಡ ಸಂಖ್ಯೆಯಲ್ಲಿದ್ದು, ದೇಶದ ಮುನ್ನಡೆಯಲ್ಲಿ ಮಹತ್ವದ ಪಾತ್ರ ವಹಿಸಲಿದ್ದಾರೆ. ವಿವೇಕಾನಂದರ ಕನಸಿನ ಬಲಿಷ್ಠ ಭಾರತ ನಿರ್ಮಾಣವಾಗಬೇಕಾದರೆ ಯುವಕ-ಯುವತಿಯರು ಶಿಕ್ಷಣವನ್ನು ಪಡೆದು ಆತ್ಮವಿಶ್ವಾಸದಿಂದ ಮುನ್ನಡೆಯಬೇಕಾಗಿದೆ ಎಂದರು. ವಿದ್ಯಾರ್ಥಿಗಳ ಜ್ಞಾನ ವಿಸ್ತಾರಕ್ಕೆ ವಿವಿಧ ಸಂಘಗಳು ಪೂರಕವಾಗಿದ್ದು ಇದರ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀನಿವಾಸ ಪೈ ವಹಿಸಿದ್ದರು. ಪ್ರಾಂಶುಪಾಲರಾದ ಜೀವನ್‌ದಾಸ್ ಎ. ಇವರು ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ ಬೋಧಿಸಿದರು. ವಿದ್ಯಾರ್ಥಿ ಕ್ಷೇಮಪಾಲಕರಾದ ಪ್ರಸಾದ್‌ಶ್ಯಾನ್‌ಭಾಗ್ ಪ್ರಾಸ್ತಾವಿಕ ಮಾತನುಗಳನ್ನಾಡಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷರದ ಜಯರಾಮ್ ಎ ಸ್ವಾಗತಿಸಿದರು. ಕಾರ್ಯದರ್ಶಿ ಭರತ್‌ರಾಜ್ ವಂದಿಸಿದರು. ಜೊತೆಕಾರ್ಯದರ್ಶಿ ಹರ್ಷಿತಾ ಅಡ್ಯೆ, ವಿದ್ಯಾರ್ಥಿ ಕ್ಷೇಮಪಾಲಕಿ ನಳಿನಾ ಕುಮಾರಿ ಉಪಸ್ಥಿತರಿದ್ದರು.

Highslide for Wordpress Plugin