ವಿವೇಕಾನಂದ ಪ.ಪೂ ಕಾಲೇಜಿನ ಕೇಶವ ಕುಮಾರ್ ಬಿ. ಯು.ಜಿ.ಸಿ ಪ್ರಾಧ್ಯಾಪಕರಾಗಿ ಆಯ್ಕೆ

Keshava-Kumar-.-Bವಿವೇಕಾನಂದ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಕುಮಾರ್ ಬಿ. ಇವರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಗಣಿತಶಾಸ್ತ್ರ ವಿಷಯದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಗೊಂಡಿದ್ದಾರೆ. ಇತ್ತೀಚೆಗೆ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಇವರು ಹಾಸನದ ಚನ್ನರಾಯಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಕಳೆದ ಏಳು ವರ್ಷಗಳಿಂದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸಿರುವ ಅವರು ವಿದ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಇವರು ವಿವೇಕಾನಂದ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿಯು ಆಗಿದ್ದಾರೆ. 2010 ರಲ್ಲಿ ಗಣಿತ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿ ನಂತರ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. ಇವರು ಸುಳ್ಯ ತಾಲೂಕಿನ ಕೂತ್ಕುಂಜ ಗ್ರಾಮದ ಬಸ್ತಿಕಾಡುನ ವೆಂಕಪ್ಪ ನಾಯ್ಕ ಮತ್ತು ರೇವತಿಯವರ ಪುತ್ರ.

Highslide for Wordpress Plugin