ವಿಶಿಷ್ಟ ಶ್ರೇಣಿಯ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭ

ವಿದ್ಯಾರ್ಥಿಗಳು ತಮ್ಮ ಶ್ರಮದ ಪ್ರತಿಫಲವಾಗಿ ಒಳ್ಳೆಯ ಅಂಕಗಳನ್ನು ಗಳಿಸಿದ್ದಾರೆ. ವಿವೇಕಾನಂದರ ಹೆಸರನ್ನು ಇಟ್ಟುಕೊಂಡ ಈ ಸಂಸ್ಥೆಯ ಧ್ಯೇಯ, ವಿವೇಕಾನಂದರ ವ್ಯಕ್ತಿತ್ವ ಎಲ್ಲರದಾಗಬೇಕು ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಶ್ರೀನಿವಾಸ ಪೈ ನುಡಿದರು.

ಅವರು ಕಾಲೇಜಿನಲ್ಲಿ ಕಳೆದ ಮಾರ್ಚ್ ತಿಂಗಳಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡುತ್ತಾ ವಿದ್ಯಾರ್ಥಿಗಳು ಈ ಕಾಲೇಜಿನ ಪ್ರತಿನಿಧಿಗಳಾಗಿ ಉತ್ತಮ ಸಮಾಜದ ನಿರ್ಮಾಣ ಮಾಡಬೇಕೆಂದು ಹಾರೈಸಿದರು.

Photo

ಮುಖ್ಯ ಅತಿಥಿಗಳಾಗಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸಂಚಾಲಕರಾದ ಶ್ರೀಯುತ ರಾಧಾಕೃಷ್ಣ ಭಕ್ತ ಇವರು ಕಾಲೇಜಿನಲ್ಲಿ ಕಲಿತ ವಿದ್ಯಾಲಯದ ಚಿಂತನೆಯನ್ನು ಅನುಷ್ಟಾನಗೊಳಿಸಲು ಪ್ರತಿಯೊಬ್ಬ ವಿದ್ಯಾರ್ಥಿಯು ಶ್ರಮಿಸಬೇಕು. ಈ ಮೂಲಕ ಉತ್ತಮ ಪ್ರಜೆಗಳಾಗಿ ಹೊರಹೊಮ್ಮಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ಇವರು ವಿದ್ಯಾರ್ಥಿಗಳ ಭವಿಷ್ಯ ಸುಂದರವಾಗಿರಲಿ ಎಂದು ಹಾರೈಸಿದರು.

ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡ ವಿಜ್ಞಾನ ವಿಭಾಗದ 188 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ ೯೦ ವಿದ್ಯಾರ್ಥಿಗಳು ಮತ್ತು ಕಲಾ ವಿಭಾಗದ 3 ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಶಿಕ್ಷಕ ರಕ್ಷಕ ಸಂಘದ ಗೌರವಾಧ್ಯಕ್ಷರಾದ ಶ್ರೀ ರವೀಂದ್ರ ಎಚ್.ವಿ, ಉಪಾಧ್ಯಕ್ಷರಾದ ಜಯಶ್ರೀ ಕೆ.ಆರ್, ಖಜಾಂಚಿ ಡಾ. ರವಿಕುಮಾರ್ ಎಂ.ಎಸ್ ಇವರು ಉಪಸ್ಥಿತರಿದ್ದರು.

ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಕು. ಚೈತ್ರಾ ಕಾರ್ಯಕ್ರಮವನ್ನು ನಿರೂಪಿಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಯಶವಂತಿ ವಂದಿಸಿದರು.

Highslide for Wordpress Plugin