ಸಾಮಾಜಿಕ ಜಾಲತಾಣಗಳು ಮತ್ತು ಬಳಕೆಯ ವಿಚಾರ ಸಂಕಿರಣ

ಸಾಮಾಜಿಕ ಜಾಲತಾಣಗಳು ಮತ್ತು ಬಳಕೆಯ ವಿಚಾರ ಸಂಕಿರಣ

Thursday, December 21st, 2017

ಸಾಮಾಜಿಕ ಜಾಲತಾಣಗಳು ಅಂದರೆ ಅಂಗೈಯಲ್ಲಿ ಜಗತ್ತು ಇದ್ದಂತೆ. ಅವುಗಳನ್ನು ನಾವು ಸಕಾರಾತ್ಮಕವಾಗಿ ಬಳಸಬೇಕು. ಅವುಗಳಲ್ಲಿರುವ ಒಳಿತಿನ ಅಂಶಗಳನ್ನು ಮನಗಂಡು ಸೂಕ್ತ ರೀತಿಯಲ್ಲಿ ಹದವರಿತು ಉಪಯೋಗಿಸಬೇಕು ಎಂದು ಕನ್ನಡ ಉಪನ್ಯಾಸಕರಾದ ಶ್ರೀ ಸುಭಾಷ್ ಪಟ್ಟಾಜೆ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿಗಳು ಆಯೋಜಿಸಿದ ’ಸಾಮಾಜಿಕ ಜಾಲತಾಣಗಳು ಮತ್ತು ಬಳಕೆ’ ಎಂಬ ವಿಚಾರ ಸಂಕಿರಣದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸಾಮಾಜಿಕ ಜಾಲತಾಣಗಳು ವ್ಯಕ್ತಿಯ ಬುದ್ಧಿಯ ಮಟ್ಟವನ್ನು ಕುಂಠಿತಗೊಳಿಸುತ್ತದೆ. ಸಂಬಂಧಗಳು ಯಾಂತ್ರಿಕವಾಗುತ್ತವೆ. ಕೇವಲ ಫೇಸ್ […]

ಇಂಗ್ಲೀಷ್ ಪ್ರಬಂಧ ಸ್ಪರ್ಧೆ:  ಧನ್ಯ ಪ್ರಭು ರಾಜ್ಯ ಮಟ್ಟಕ್ಕೆ ಆಯ್ಕೆ

ಇಂಗ್ಲೀಷ್ ಪ್ರಬಂಧ ಸ್ಪರ್ಧೆ: ಧನ್ಯ ಪ್ರಭು ರಾಜ್ಯ ಮಟ್ಟಕ್ಕೆ ಆಯ್ಕೆ

Saturday, December 16th, 2017

ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಮೈಸೂರಿನ S.B.R.R. ಮಹಾಜನ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿನಿ ಧನ್ಯ ಪ್ರಭು ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಉಪ್ಪಿನಂಗಡಿಯ ರಾಮನಗರದ ಚಂದ್ರಶೇಖರ ಪ್ರಭು ಮತ್ತು ನಯನ ಪ್ರಭು ದಂಪತಿಗಳ ಪುತ್ರಿ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

ವಿಚಾರ ಮಂಡನೆ ಕಾರ್ಯಕ್ರಮ

ವಿಚಾರ ಮಂಡನೆ ಕಾರ್ಯಕ್ರಮ

Thursday, December 14th, 2017

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ವರ್ಷದ ಕಲಾ ವಿಭಾಗದ ವಿದ್ಯಾರ್ಥಿಗಳಿಂದ ಮಾದಕ ದ್ರವ್ಯದ ವ್ಯಸನ ಮತ್ತು ದಾಸರಾಗುವಿಕೆ ಎಂಬ ವಿಷಯದ ಕುರಿತು ವಿಚಾರ ಮಂಡನೆ ಕಾರ್ಯಕ್ರಮವು ನಡೆಯಿತು. ಮುಖ್ಯ ಅತಿಥಿಯಾಗಿದ್ದ ಕಾಲೇಜಿನ ಉಪನ್ಯಾಸಕಿ ಮೇಘಾ ಆರ್‌. ದೇವಾಡಿಗ ಮಾತನಾಡಿ, ಮಾದಕ ದ್ರವ್ಯಗಳನ್ನು ವಿದ್ಯಾರ್ಥಿ ಸಮೂಹ ಹಾಗೂ ಹದಿಹರೆಯದವರು ಹೆಚ್ಚಾಗಿ ಪ್ರಯತ್ನಿಸುತ್ತಾರೆ. ಈ ಮೂಲಕ ಅನೇಕರು ದಾರಿ ತಪ್ಪುತ್ತಿದ್ದಾರೆ. ಹೆತ್ತವರು ತಮ್ಮ ಮಕ್ಕಳಿಗೆ ಇದರ ಬಗ್ಗೆ ಸರಿಯಾದ ತಿಳುವಳಿಕೆ ನೀಡಿದಾಗ ದುಶ್ಚಟಗಳಿಂದ ದೂರವಿರಲು ಸಾಧ್ಯ ಎಂದರು. ಕಾಲೇಜಿನ […]

ವಿಚಾರ ಮಂಡನೆ ಕಾರ್ಯಕ್ರಮ

ವಿಚಾರ ಮಂಡನೆ ಕಾರ್ಯಕ್ರಮ

Friday, December 8th, 2017

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳಿಂದ ವಿಚಾರ ಮಂಡನೆಯು ನಡೆಯುತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಜೀವನ್‌ದಾಸ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕಾಲೇಜಿನ ಉಪನ್ಯಾಸಕಿ ಉಷಾ ಎ. ಎನ್. ಮಾತನಾಡಿ ಯುವಕರು ಅಂದರೆ ಶಕ್ತಿ. ಅವರು ಹೊಸ ಯುಗದ ನಿರ್ಮಾಪಕರು. ತಮ್ಮ ಧೀ ಶಕ್ತಿಯನ್ನು ಸಕರಾತ್ಮಕವಾಗಿ ಬಳಸಿ ದೇಶಕ್ಕೆ ಭದ್ರತೆಯನ್ನು ಒದಗಿಸಬೇಕು. ಅದನ್ನು ನಾವು ಉಪಯೋಗಿಸುವುದರಲ್ಲಿ ನಮ್ಮತನ ಅಡಗಿದೆ ಎಂದು ನುಡಿದರು. ಕಲಾ ವಿಭಾಗದ ವಿದ್ಯಾರ್ಥಿಗಳಾದ ಪೂಜಾ, ಚನ್ನಬಸವ, ಧನ್ಯಾ, ಶರಣ್ಯ, ರೂಪ, […]

ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ಕಾಲೇಜಿನ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ

ರಾಷ್ಟ್ರ ಮಟ್ಟದಲ್ಲಿ ಸಾಧನೆಗೈದ ಕಾಲೇಜಿನ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ

Wednesday, November 29th, 2017

ಕ್ರಿಯಾ ಧರ್ಮದ ಮುನ್ನೋಟ, ಮಾನವೀಯ ಮಿಡಿತ ಮತ್ತು ಸದಭಿರುಚಿಗಳು ವಿದ್ಯಾರ್ಥಿಯ ಬದುಕಿನ ಸೂತ್ರಗಳು. ಆಸಕ್ತಿ, ಅನುಭವ ಜ್ಞಾನ ಮತ್ತು ಜೀವನ ಪ್ರೀತಿಯನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಪ್ರತಿ ವಿದ್ಯಾರ್ಥಿಯೂ ಉನ್ನತ ಮಟ್ಟಕ್ಕೆ ಏರಬಹುದು ಎಂದು ಇಸ್ರೋದ ನಿವೃತ್ತ ವಿಜ್ಞಾನಿ ಡಾ.ಕೃಷ್ಣಸ್ವಾಮಿ ಹೇಳಿದರು. ರಾಷ್ಟ್ರಮಟ್ಟದಲ್ಲಿ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮದ ಮುಖ್ಯಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. ಸಾಧನೆ ಮತ್ತು ಗೆಲುವು ವಿದ್ಯಾರ್ಥಿಯ ಬೆಳವಣಿಗೆಯ ಸಂಕೇತ. ವಿದ್ಯಾರ್ಥಿ ಬೆಳೆದಂತೆಲ್ಲ ಪ್ರೌಢ ಪರಿಸ್ಥಿತಿ ನಿರ್ಮಾಣಗೊಳ್ಳುತ್ತದೆ. ವಿದ್ಯಾರ್ಥಿ ಮಾಗಿದಂತೆಲ್ಲ ತನ್ನ […]

ಅಂತರ್‌ ಕಾಲೇಜು ಸಾಂಸ್ಕೃತಿಕ ಸ್ಫರ್ಧೆ: ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

ಅಂತರ್‌ ಕಾಲೇಜು ಸಾಂಸ್ಕೃತಿಕ ಸ್ಫರ್ಧೆ: ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Tuesday, November 28th, 2017

ಸರೋಜಿನಿ ಮಧುಸೂಧನ ಪದವಿಪೂರ್ವ ಕಾಲೇಜು, ಮಂಗಳೂರು ಇಲ್ಲಿ ಇತ್ತೀಚೆಗೆ ನಡೆದ ಅಂತರ್‌ಕಾಲೇಜು ಸಾಂಸ್ಕೃತಿಕ ಸ್ಫರ್ಧೆಗಳಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳ ತಂಡ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಭಜನೆ, ದೇಶಭಕ್ತಿಗೀತೆ, ನಾಟಕ ಸ್ಫರ್ಧೆಗಳಲ್ಲಿ ಪ್ರಥಮ ಬಹುಮಾನ ಮತ್ತು ಭರತನಾಟ್ಯ, ಪ್ಲವರ್‌ ಅರೇಂಜ್‌ಮೆಂಟ್, ಚಿತ್ರಕಲೆ ಮತ್ತು ಭಾವಗೀತೆ ಸ್ಪರ್ಧೆಗಳಲ್ಲಿ ದ್ವಿತೀಯ ಬಹುಮಾನವನ್ನು ಪಡೆದುಕೊಂಡು ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

ವಿಚಾರ ಮಂಡನೆ

ವಿಚಾರ ಮಂಡನೆ

Saturday, November 25th, 2017

ಇಲ್ಲಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದ ವಿದ್ಯಾರ್ಥಿಗಳಿಂದ ’ವೃದ್ಧಾಪ್ಯದ ಸಮಸ್ಯೆಗಳು’ ಎಂಬ ವಿಷಯದ ಕುರಿತು ವಿಚಾರ ಮಂಡನೆಯು ನಡೆಯುತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಜೀವನ್‌ದಾಸ್ ವಹಿಸಿದ್ದರು. ಕಾರ್ಯಕ್ರಮಕ್ಕೆ ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ ಅವರು ಮಾತನಾಡಿ, ’ವೃದ್ಧಾಪ್ಯ ಎನ್ನುವುದು ನಮ್ಮಲ್ಲೊಂದು ಹೊಸತಾದ ಬದಲಾವಣೆ ಉಂಟಾಗುವ ಸಮಯ. ನಾವು ಬಾಲ್ಯದಿಂದ ಬೆಳೆಸಿಕೊಂಡು ಬಂದ ಸಂಸ್ಕಾರದಿಂದ ನಮಗೆ ವೃದ್ಧಾಪ್ಯವನ್ನ ಸಹನೀಯ ಮಾಡಲು ಸಾಧ್ಯ. ಯೋಗದಿಂದ ಅನಾರೋಗ್ಯವನ್ನು ದೂರವಿಟ್ಟರೆ ವೃದ್ದಾಪ್ಯದಲ್ಲಿ ಸುಖಜೀವನವನ್ನು ನಡೆಸಲು ಸಾಧ್ಯ […]

ವಿದ್ಯಾಭಾರತಿ ರಾಷ್ಟ್ರ ಮಟ್ಟದ ಆಥ್ಲೆಟಿಕ್ಸ್‌ನಲ್ಲಿ ಪ್ರಥಮ

ವಿದ್ಯಾಭಾರತಿ ರಾಷ್ಟ್ರ ಮಟ್ಟದ ಆಥ್ಲೆಟಿಕ್ಸ್‌ನಲ್ಲಿ ಪ್ರಥಮ

Friday, November 17th, 2017

ಮೀರತ್­ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಆಥ್ಲೆಟಿಕ್ಸ್‌ನಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಶ್ರದ್ದಾ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ಹರಿಯಾಣದ ರೋತಕ್‌ನಲ್ಲಿ SGFI ನಡೆಸುವ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇವರು ಪಡ್ನೂರು ಗ್ರಾಮ ಅಜೇಯನಗರದ ಮನೋಜ್‌ಕುಮಾರ್ ಮತ್ತು ಅನುರಾಧ ಬಿ. ದಂಪತಿಗಳ ಪುತ್ರಿ. ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ  ಕಾಲೇಜಿಗೆ ದ್ವಿತೀಯ ಸ್ಥಾನ

ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಕಾಲೇಜಿಗೆ ದ್ವಿತೀಯ ಸ್ಥಾನ

Wednesday, November 15th, 2017

ದಕ್ಷಿಣ ಕನ್ನಡ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು, ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಿಲ್ಲಾಮಟ್ಟದ ಹ್ಯಾಂಡ್ ಬಾಲ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ| ರವಿಶಂಕರ್ ಮತ್ತು ಡಾ| ಜ್ಯೋತಿ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ  ಕಾಲೇಜಿಗೆ ಪ್ರಥಮ ಸ್ಥಾನ

ತಾಲೂಕು ಮಟ್ಟದ ತ್ರೋ ಬಾಲ್ ಪಂದ್ಯಾಟದಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ

Wednesday, November 15th, 2017

ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು, ಬೆಟ್ಟಂಪಾಡಿ ಇದರ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ತ್ರೋ ಬಾಲ್‌ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ಈ ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ| ರವಿಶಂಕರ್ ಮತ್ತು ಡಾ| ಜ್ಯೋತಿ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ತಂಡದ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ […]

Highslide for Wordpress Plugin