ವಾಣಿಜ್ಯ ಸಂಘದ ಸಮಾರೋಪ ಸಮಾರಂಭ

ವಾಣಿಜ್ಯ ಸಂಘದ ಸಮಾರೋಪ ಸಮಾರಂಭ

Tuesday, December 27th, 2016

ವಿದ್ಯಾರ್ಥಿಗಳಿಗೆ ಬದುಕಿನಲ್ಲಿ ಶಿಕ್ಷಣ ಮುಖ್ಯ. ಅದರಲ್ಲೂ ಜೀವನ ಮೌಲ್ಯ ತಿಳಿಸಿಕೊಡುವ ಶಿಕ್ಷಣ ಅತ್ಯಂತ ಹೆಚ್ಚು ಅವಶ್ಯಕ ಎಂದು ಸವಣೂರು ವಿದ್ಯಾರಶ್ಮಿ ಪದವಿ ಕಾಲೇಜಿನ ವಾಣಿಜ್ಯ ವಿಭಾಗದ ಪ್ರಾದ್ಯಾಪಕರಾದ ಶ್ರೀ ಪುಷ್ಪರಾಜ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಾಣಿಜ್ಯ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ವಹಿಸಿಕೊಂಡಿದ್ದರು.ಕಾರ್ಯಕ್ರಮದಲ್ಲಿ ವಾಣಿಜ್ಯ ಸಂಘದ ಸಂಯೋಜಕಿ ಕು| ಅಕ್ಷತಾ ಉಪಸ್ಥಿತರಿದ್ದರು. ಸಂಘದ ವತಿಯಿಂದ ನಡೆಸಲಾದ ಹಲವು ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ […]

ಯಶಸ್- 2017 ನೇ ತಂಡದ ಅರ್ಹತಾ ಪ್ರವೇಶ ಪರೀಕ್ಷೆ

ಯಶಸ್- 2017 ನೇ ತಂಡದ ಅರ್ಹತಾ ಪ್ರವೇಶ ಪರೀಕ್ಷೆ

Sunday, December 25th, 2016

ವಿವೇಕಾನಂದ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಭಾರತೀಯ ನಾಗರೀಕ ಸೇವಾ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುವ ಯಶಸ್-2017 ನೇ ತಂಡದ ಆಯ್ಕೆಗಾಗಿ ನಡೆಸಲಾಗುವ ಅರ್ಹತಾ ಪ್ರವೇಶ ಪರೀಕ್ಷೆಯು ಡಿಸೆಂಬರ್ 25 ರಂದು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು. ಪುತ್ತೂರು ಅಸುಪಾಸಿನ ಸುಮಾರು 300  ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹಾಜರಾಗಿದ್ದರು. ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು, ಕೊಡಗು ಜಿಲ್ಲೆಯ 8 ಕೇಂದ್ರಗಳಲ್ಲಿ ಏಕಕಾಲದಲ್ಲಿ ನಡೆದ ಪರೀಕ್ಷೆಯಲ್ಲಿ 1000 ಕ್ಕೂ ಹೆಚ್ಚು ಹತ್ತನೇ ತರಗತಿಯ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಗೆ ಮುಂದೆ ಮೌಖಿಕ […]

ಕಲಾ ಸಂಘದ ಸಮಾರೋಪ ಸಮಾರಂಭ

ಕಲಾ ಸಂಘದ ಸಮಾರೋಪ ಸಮಾರಂಭ

Tuesday, December 20th, 2016

ಸ್ಪರ್ಧಾತ್ಮಕ ಜಗತ್ತಿನಲ್ಲಿ ಸ್ಪರ್ಧಿಸಲು ನಾವೆಲ್ಲರೂ ಸಮಾಜಮುಖಿಗಳಾಗಿ ಸಮಾಜಕ್ಕೆ ಒಳಿತಾಗುವ ಕಾರ್ಯಗಳನ್ನು ಕೈಗೊಳ್ಳಬೇಕು. ಈ ಮೂಲಕ ಗುರಿಯನ್ನು ಸಾಧಿಸುವಲ್ಲಿ ಪ್ರಯತ್ನಶೀಲರಾಗಬೇಕು ಎಂದು ಪೂತ್ತೂರಿನ ನೆಲ್ಲಿಕಟ್ಟೆಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ಪ್ರಾದ್ಯಾಪಕರಾದ ಡಾ| ಶ್ರೀಧರ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕಲಾ ಸಂಘದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು. ಒಬ್ಬ ಕಲಾವಿಭಾಗದ ವಿದ್ಯಾರ್ಥಿ ಸಮಾಜಕ್ಕೆ ಹೆಚ್ಚು ಹತ್ತಿರವಾಗಿರುತ್ತಾನೆ. ಸಮಾಜದಲ್ಲಿ ನಡೆಯುವ ವಿದ್ಯಾಮಾನಗಳ ಬಗ್ಗೆ ಜ್ಞಾನವಿದ್ದಾಗ ಆಧುನಿಕ ಜಗತ್ತಿನಲ್ಲಿ ಅರ್ಥಪೂರ್ಣವಾಗಿ ಬದುಕಲು ಸಾಧ್ಯ […]

ಕನಸುಗಳು -2016 ಕಾರ್ಯಕ್ರಮದ ಸಮಾರೋಪ ಸಮಾರಂಭ

ಕನಸುಗಳು -2016 ಕಾರ್ಯಕ್ರಮದ ಸಮಾರೋಪ ಸಮಾರಂಭ

Sunday, November 27th, 2016

ಕನಸುಗಳ ಪರಿಧಿ ವಿಸ್ತಾರವಾಗಿ ಕನಸು ನನಸಾಗಲಿ. ಇದರಿಂದ ವಿದ್ಯಾರ್ಥಿಗಳ, ಪೋಷಕರ ಕನಸು ನನಸಾಗುತ್ತದೆ ಎಂದು ಖ್ಯಾತ ವಿಜ್ಞಾನಿಯಾದ ಶ್ರೀ ಸುಧೀಂದ್ರ ಹಾಲ್ದೊಡ್ಡೇರಿ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆಯನ್ನು ನೀಡುವ ಕನಸುಗಳು-2016 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಮಾನವೀಯ ಮೌಲ್ಯಗಳ ಜೊತೆಜೊತೆಗೆ ಸವಲತ್ತುಗಳನ್ನು ಹೆಚ್ಚಿಸಲು ವಿದ್ಯಾರ್ಥಿಗಳ ಪ್ರಯತ್ನ ನಿರಂತರವಾಗಿರಬೇಕು. ವ್ಯಕ್ತಿ ದೇಶಕ್ಕೆ ಕೊಡುಗೆ ನೀಡಬೇಕಾದರೆ ವಿಜ್ಞಾನಿಯೇ ಆಗಬೇಕೆಂದಿಲ್ಲ. ಯಾವುದೇ ಕ್ಷೇತ್ರದಲ್ಲಿ ಪರಿಣಿತಿಯನ್ನು […]

ಕನಸುಗಳು -2016 ಕಾರ್ಯಕ್ರಮ

ಕನಸುಗಳು -2016 ಕಾರ್ಯಕ್ರಮ

Saturday, November 26th, 2016

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ, ಛಲ ಮತ್ತು ಆತ್ಮವಿಶ್ವಾಸ ಇದ್ದಾಗ ತಮ್ಮ ಕನಸನ್ನು ನನಸಾಗಿಸಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ ಇದರ ವಿಶ್ರಾಂತ ಕುಲಪತಿಯವರಾದ ಡಾ| ಮೀನಾ ಚಂದಾವರ್‌ಕರ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆಯನ್ನು ನೀಡುವ ಕನಸುಗಳು-2016 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕನಸು ಇದ್ದರೆ ಮಾತ್ರ ಜೀವನ ಪರಿಪೂರ್ಣವಾಗಿರುತ್ತದೆ. ಆದರೆ ನಮ್ಮ ಕ್ಷಮತೆಯನ್ನು ಸರಿಯಾಗಿ ಉಪಯೋಗಿಸಿಕೊಳ್ಳದಿದ್ದರೆ ಎಲ್ಲವೂ ವ್ಯರ್ಥ. ಯಾವ ಕನಸು […]

ಕಾಲೇಜು ವಾರ್ಷಿಕೋತ್ಸವ ಸಮಾರೋಪ

ಕಾಲೇಜು ವಾರ್ಷಿಕೋತ್ಸವ ಸಮಾರೋಪ

Friday, November 25th, 2016

ಕಲೆಯು ವ್ಯಕ್ತಿತ್ವ ವಿಕಸನಕ್ಕೆ ಅತ್ಯಂತ ಪೂರಕವಾಗಿರುವುದರಿಂದ ವಿದ್ಯಾರ್ಥಿಗಳು ಕಲೆಯೊಂದಿಗೆ ಗಾಢವಾದ ಸಂಬಂಧವನ್ನು ಹೊಂದಿರಬೇಕು. ತಂತ್ರಜ್ಞಾನದ ಒಳ್ಳೆಯ ಅಂಶಗಳನ್ನು ಮಾತ್ರ ಬಳಸಿಕೊಂಡು ಆ ಮೂಲಕ ಉದ್ಯೋಗದ ವಿವಿಧ ರಂಗಗಳ ಕುರಿತ ಜ್ಞಾನವನ್ನು ಪಡೆದುಕೊಳ್ಳಬೇಕು ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಶ್ರೀ ರಘುನಂದನ ಬೇರ್ಕಡವು ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದ ಎರಡನೇ ದಿವಸದಂದು ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಕಲೆ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು […]

ಕಾಲೇಜು ವಾರ್ಷಿಕೋತ್ಸವ

ಕಾಲೇಜು ವಾರ್ಷಿಕೋತ್ಸವ

Thursday, November 24th, 2016

ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಬಾಳಿದರೆ ಮಾತ್ರ ಗೌರವ ಸಿಗುತ್ತದೆ. ಗೌರವ ನಮ್ಮನ್ನು ಹುಡುಕಿಕೊಂಡು ಬರುವ ರೀತಿಯಲ್ಲಿ ನಾವು ಬೆಳೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ಸುಲೋಚನಾ ಜಿ.ಕೆ.ಭಟ್ ಹೇಳಿದರು. ವಿವೇಕಾನಂದ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಕನಸನ್ನು ಬಿತ್ತುವ ಕೆಲಸವನ್ನು ವಿದ್ಯಾಸಂಸ್ಥೆಯು ಮಾಡುತ್ತಿದೆ. ಇಂತಹ ಕನಸುಗಳಿಂದ ಬದುಕಿಗೊಂದು ಸ್ವಾರಸ್ಯ ಸಿಗುತ್ತದೆ. ಜೀವನದಲ್ಲಿ ಅಸಾಧ್ಯವಾದುದು ಯಾವುದು ಇಲ್ಲ. ಜಗತ್ತಿನಲ್ಲಿ […]

ರಾಷ್ಟ್ರ ಮಟ್ಟದ ಸ್ಫರ್ಧೆಗೆ ಆಯ್ಕೆ

ರಾಷ್ಟ್ರ ಮಟ್ಟದ ಸ್ಫರ್ಧೆಗೆ ಆಯ್ಕೆ

Wednesday, November 23rd, 2016

ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಇತ್ತೀಚೆಗೆ Rock Climbing training Centre  ಶಿಬಿರದಲ್ಲಿ ನಡೆದ Rock Climbing    ಸ್ಫರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ವಿದ್ಯಾರ್ಥಿ ಮೋಕ್ಷಿತ್ ಎಂ. ಎಲ್ ಭಾಗವಹಿಸುತ್ತಾರೆ. ಇವರು 100 ಅಡಿ ಎತ್ತರವನ್ನು 55 ಸೆಕಂಡುಗಳಲ್ಲಿ ಪೂರ್ಣಗೊಳಿಸುವುದರ ಮೂಲಕ ರಾಷ್ಟ್ರೀಯ ಮಟ್ಟದ ಸ್ಫರ್ಧೆಗೆ ಆಯ್ಕೆಯಾಗಿರುತ್ತಾರೆ. ಅದಲ್ಲದೆ ಪ್ಯಾರಾಜಂಪಿಂಗ್ ಸ್ಫರ್ಧೆಯಲ್ಲೂ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.. ಇವರು ಮಡಿಕೇರಿಯ ಸುಂಟಿಕೊಪ್ಪದ ನಿವಾಸಿ ಲೋಹಿತಾಶ್ವ ಎಂ. ಎನ್ ಮತ್ತು ಭಾರತಿ ಎಂ. ಎಲ್ ಇವರ ಸುಪುತ್ರ.

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ

ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬಹುಮಾನ

Friday, November 11th, 2016

ದಕ್ಷಿಣಕನ್ನಡ ಪದವಿಪೂರ್ವ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಜರುಗಿದ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜು ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದಿರುತ್ತದೆ. 5 ವಿದ್ಯಾರ್ಥಿನಿಯರು ಮತ್ತು 11 ವಿದ್ಯಾರ್ಥಿಗಳು ಕಾಲೇಜನ್ನು ಪ್ರತಿನಿಧಿಸಿ ಒಟ್ಟು 17 ಚಿನ್ನ, 12 ಬೆಳ್ಳಿ ಮತ್ತು 1 ಕಂಚಿನ ಪದಕವನ್ನು ಗಳಿಸುವ ಮೂಲಕ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ ಕೆ. ಇವರು 3 ಚಿನ್ನದ ಪದಕದೊಂದಿಗೆ ವೈಯಕ್ತಿಕ ಚಾಂಪಿಯನ್‌ಶಿಪ್ ಗಳಿಸಿರುತ್ತಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯು ಮೂಡಬಿದಿರೆಯ ಆಳ್ವಾಸ್ ಪದವಿಪೂರ್ವ […]

ವಾರ್ಷಿಕ ಕ್ರೀಡಾಕೂಟ- 2016

ವಾರ್ಷಿಕ ಕ್ರೀಡಾಕೂಟ- 2016

Thursday, November 10th, 2016

ಮನುಷ್ಯನ ಇರುವಿಕೆ ಇತರರ ಗಮನಕ್ಕೆ ಬಾರದಿದ್ದರೂ, ಸತತ ಪ್ರಯತ್ನದ ಮೂಲಕ ಆಗುವ ಗೆಲುವಿನಿಂದ ಎಲ್ಲರ ಮನೆ ಮಾತಾಗಬೇಕು ಎಂದು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಪೀಟರ್ ವಿಲ್ಸನ್ ಪ್ರಭಾಕರ್ ತಿಳಿಸಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಕಲಿಕೆಯ ಜೊತೆಗೆ ದೈಹಿಕ ಬೆಳವಣಿಗೆ ಮತ್ತು ಮಾನಸಿಕ ಬೆಳವಣಿಗೆ ಅವಶ್ಯಕ. ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ. ಕಠಿಣ ಪರಿಶ್ರಮ ಮತ್ತು ಕ್ರೀಡಾಸ್ಫೂರ್ತಿಯಿಂದ ಮಾತ್ರ ಕ್ರೀಡೆಯಲ್ಲಿ […]

Highslide for Wordpress Plugin