ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ

ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮ

Wednesday, November 2nd, 2016

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವನ್ನು ನವೆಂಬರ್ 2 ರಂದು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಕೃಷ್ಣ ಭಟ್ ಮಾತನಾಡಿ ವಿದ್ಯಾರ್ಥಿ ಶಕ್ತಿಯೇ ರಾಷ್ಟ್ರಶಕ್ತಿ. ಸ್ವಚ್ಛತೆಯ ಮೂಲವೇ ಮನಸ್ಸು. ನಮ್ಮ ಪರಿಸರವನ್ನು ಸ್ವಚ್ಛಗೊಳಿಸುವ ಜೊತೆ ಜೊತೆಗೆ ಮನಸ್ಸನ್ನು ಶುದ್ಧಗೊಳಿಸಬೇಕು. ಈ ಮೂಲಕ ಸ್ವಚ್ಛ ಭಾರತದ ನಿರ್ಮಾಣಕ್ಕೆ ನಾವೆಲ್ಲರೂ ಕೈ ಜೋಡಿಸೋಣ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ರವೀಂದ್ರ ಪಿ, […]

ಯೋಗ ಸ್ಫರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಯೋಗ ಸ್ಫರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Friday, October 28th, 2016

ಬೆಂಗಳೂರಿನಲ್ಲಿ ನಡೆದ ವಿದ್ಯಾಭಾರತಿ ರಾಜ್ಯ ಮತ್ತು ದಕ್ಷಿಣ ಪ್ರಾಂತ ಮಟ್ಟದ ಯೋಗ ಸ್ಫರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ರತೀಶ್ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಕಾರ್ತಿಕ ಪ್ರಥಮ ಸ್ಥಾನ ಪಡೆದಿದ್ದಾರೆ. ಈ ಮೂಲಕ ಡಿಸೆಂಬರ್ 1 ರಿಂದ 4 ವರೆಗೆ ಅಹಮದಾಬಾದ್‌ನಲ್ಲಿ ನಡೆಯಲಿರುವ ವಿದ್ಯಾಭಾರತಿ ರಾಷ್ಟ್ರಮಟ್ಟದ ಸ್ಫರ್ಧೆಗೆ ಆಯ್ಕೆಯಾಗಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ಇವರು ವಿಜೇತರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದ್ದಾರೆ.

'ಗ್ರಾಮಸ್ಥರೊಂದಿಗೆ ವಿದ್ಯಾರ್ಥಿಗಳು' ಕಾರ್ಯಕ್ರಮ

‘ಗ್ರಾಮಸ್ಥರೊಂದಿಗೆ ವಿದ್ಯಾರ್ಥಿಗಳು’ ಕಾರ್ಯಕ್ರಮ

Monday, September 26th, 2016

ಗ್ರಾಮವು ವಿಕಸನವಾಗಬೇಕಾದರೆ ಎಲ್ಲರ ಅಳಿಲು ಸೇವೆಯು ಅತ್ಯಗತ್ಯ. ವಿದ್ಯಾರ್ಥಿಗಳಿಗೆ ತರಗತಿಯ ಶಿಕ್ಷಣದ ಜೊತೆಗೆ ಹೊರಗಿನ ಶಿಕ್ಷಣ ನೀಡಿದಾಗ ಮಾತ್ರ ವಿದ್ಯಾರ್ಥಿಗಳ ಜ್ಞಾನ ವಿಕಸನವಾಗಿ ಗ್ರಾಮ ಹಾಗೂ ದೇಶದ ಅಭಿವೃದ್ಧಿಯಾಗುತ್ತದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾದ ಶ್ರೀ ಕೃಷ್ಣ ಭಟ್ ಹೇಳಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಕಲಾವಿಭಾಗದ ವಿದ್ಯಾರ್ಥಿಗಳು ಮತ್ತು ಬನ್ನೂರು ಗ್ರಾಮಪಂಚಾಯತ್ ಸಹಯೋಗದೊಂದಿಗೆ ಗ್ರಾಮಸ್ಥರೊಂದಿಗೆ ವಿದ್ಯಾರ್ಥಿಗಳು ಎಂಬ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ನ್ಯಾಯವಾದಿ ಶ್ರೀ ವಿಜಯ ನಾರಾಯಣ ವಹಿಸಿದ್ದರು. ನಂತರ ಮಾತನಾಡಿ […]

ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಸಮಾರೋಪ ಸಮಾರಂಭ

ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಸಮಾರೋಪ ಸಮಾರಂಭ

Saturday, September 24th, 2016

ಕಠಿಣ ಪರಿಶ್ರಮ ಮತ್ತು ಕ್ರೀಡಾಸ್ಫೂರ್ತಿಯಿಂದ ಮಾತ್ರ ಕ್ರೀಡೆಯಲ್ಲಿ ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ತಿಳಿಸಿದರು. ಅವರು ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಅಧ್ಯಕ್ಷೀಯ ಮಾತುಗಳನ್ನಾಡಿ ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ. ಭಾಗವಹಿಸಿದ ಎಲ್ಲಾ ಕ್ರೀಡಾಪಟುಗಳಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯ ಮುಂದಿನ […]

ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ 2016-17

ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ 2016-17

Friday, September 23rd, 2016

ನಿರಂತರ ಮತ್ತು ಕಠಿಣ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ ಎಂದು ರಾಷ್ಟ್ರೀಯ ಅಥ್ಲೀಟ್ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಶ್ರೀ ಆನಂದ ಶೆಟ್ಟಿ ತಿಳಿಸಿದರು. ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯ ಮಹತ್ವವನ್ನು ಅವರು ವಿವರಿಸಿದರು. ಅಧ್ಯಕ್ಷರಾಗಿ ಕಾಲೇಜಿನ […]

ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Thursday, September 15th, 2016

ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಸಂತ ಅಲೋಶಿಯಸ್ ಪದವಿ ಕಾಲೇಜಿನ ನಿವೃತ್ತ ಉಪಪ್ರಾಂಶುಪಾಲರಾದ ಪ್ರೊ. ರೊನಾಲ್ಡ್ ಪಿಂಟೋ ತಿಳಿಸಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ಮತ್ತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿ ಕಲಿಯುವಿಕೆಯ ವಿವಿಧ ಹಂತಗಳನ್ನು ಪರಿಚಯಿಸಿಕೊಟ್ಟರು. ಪಿಯುಸಿ ನಂತರ ಲಭ್ಯವಿರುವ ವಿವಿಧ ಕೋರ್ಸ್‌ಗಳು ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿಕೊಟ್ಟರು. ಸಮಾರಂಭದಲ್ಲಿ ವಿಜ್ಞಾನ ಸಂಘದ […]

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಬಾಲಕರ ತಂಡಕ್ಕೆ ವಿನ್ನರ್‍ಸ್ ಅಪ್ ಪ್ರಶಸ್ತಿ

ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಬಾಲಕರ ತಂಡಕ್ಕೆ ವಿನ್ನರ್‍ಸ್ ಅಪ್ ಪ್ರಶಸ್ತಿ

Saturday, September 3rd, 2016

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಮಹಾವೀರ ಪದವಿ ಪೂರ್ವ ಕಾಲೇಜು ಮೂಡಬಿದ್ರೆಯಲ್ಲಿ ಸೆಪ್ಟೆಂಬರ್ 1, 2016 ರಂದು ನಡೆದ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ವಿನ್ನರ್‍ಸ್ ಅಪ್ ಪ್ರಶಸ್ತಿಯನ್ನು ಪಡೆದಿದೆ. ತಂಡದ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಅಧ್ಯಾಪಕ ವೃಂದ ಅಭಿನಂದಿಸಿದ್ದಾರೆ.

ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ

ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ

Saturday, September 3rd, 2016

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು. 2016-2018 ರ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಅಧ್ಯಕ್ಷರಾದ ಶ್ರೀಮತಿ ಶ್ಯಾಮಲ ಇವರಿಗೆ ನಿಕಟಪೂರ್ವ ಅಧ್ಯಕ್ಷರಾದ ಶ್ರೀವಸಂತ ಭಟ್ ಇವರು ಅಧಿಕಾರವನ್ನು ಹಸ್ತಾಂತರಿಸಿದರು. ಬಳಿಕ ಶ್ರೀಮತಿ ಶ್ಯಾಮಲ ಮಾತನಾಡಿ ಈ ವಿದ್ಯಾಸಂಸ್ಥೆಯ ಏಳಿಗೆಗಾಗಿ ವಿಶೇಷ ಶ್ರಮ ವಹಿಸುತ್ತೇನೆ ಎಂದು ಭರವಸೆಯಿತ್ತರು. ಶಿಕ್ಷಕ- ರಕ್ಷಕ ಸಂಘದ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ಮಂಗಳ ಗೌರಮ್ಮ ಆಯ್ಕೆಯಾದರು. ನಿಕಟ ಪೂರ್ವ ಅಧ್ಯಕ್ಷರಾದ ಶ್ರೀವಸಂತ ಭಟ್ […]

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್‍ಸ್ ಅಪ್ ಪ್ರಶಸ್ತಿ

ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್‍ಸ್ ಅಪ್ ಪ್ರಶಸ್ತಿ

Saturday, August 20th, 2016

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಫನಾ ಪಿಯು ಕಾಲೇಜು ಬಜ್ಪೆಯಲ್ಲಿ ಅಗಸ್ಟ್ 18, 2016 ರಂದು ನಡೆದ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಕಾಲೇಜಿನ ಬಾಲಕರ ತಂಡ ರನ್ನರ್‍ಸ್ ಅಪ್ ಪ್ರಶಸ್ತಿಯನ್ನು ಪಡೆದಿದೆ. ಸುಮಾರು 20 ಕ್ಕೂ ಮಿಕ್ಕಿ ಕಾಲೇಜುಗಳ 106 ಸ್ಪರ್ಧಿಗಳು ಭಾಗವಹಿಸಿದ ಪಂದ್ಯಾಟದಲ್ಲಿ ಮೂರನೇ ಸ್ಥಾನಗಳಿಸಿದ ವತನ್ ಹಾಗೂ ಐದನೇ ಸ್ಥಾನಗಳಿಸಿದ ಚಿರಾಗ್ ಹಿರಿಂಜ ಇವರು ರಾಯಚೂರ್‌ನಲ್ಲಿ ನಡೆಯುವ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ತಂಡದ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ […]

ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Saturday, August 13th, 2016

“ಪ್ರತಿಯೊಬ್ಬ ವಿದ್ಯಾರ್ಥಿಯು ಪಾಠ ಪ್ರವಚನಗಳ ಜೊತೆಗೆ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ತನ್ನ ಮೂಲಕ ಅರ್ಪಣಾ ಮನೋಭಾವ ಮತ್ತು ಸೇವಾ ಮನೋಭಾವವನ್ನು ರೂಢಿಸಿಕೊಳ್ಳಬೇಕು” ಎಂದು ನವಜೀವನ ಪ್ರೌಢಶಾಲೆ, ಬದಿಯಡ್ಕ ಇದರ ಮುಖ್ಯೋಪಾಧ್ಯಾಯರಾದ ಶ್ರೀ ಎಸ್. ಶಂಕರನಾರಾಯಣ ಭಟ್ ಇವರು ತಿಳಿಸಿದರು. ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯಲ್ಲಿ ವಿದ್ಯಾರ್ಥಿಗಳ ಪ್ರಗತಿಯಲ್ಲಿ ಪೋಷಕರ ಪಾತ್ರ ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು “ಮಕ್ಕಳು ಇಚ್ಛಾಶಕ್ತಿ, ಬದ್ಧತೆ, ಛಲವನ್ನು ಬೆಳೆಸಿಕೊಳ್ಳಬೇಕು. ನಕರಾತ್ಮಕ ಮಾತುಗಳನ್ನಾಡದೆ ಸಕರಾತ್ಮಕ ಮಾತುಗಳನ್ನು ಆಡುವಂತೆ […]

Highslide for Wordpress Plugin