ಪುತ್ತೂರು: ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಶಿಕ್ಷಣ ಒದಗಿಸಬೇಕು. ಅಂಥ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಸ್. ಆರ್. ರಂಗಮೂರ್ತಿ ಹೇಳಿದರು. ‘ಉನ್ನತ ವ್ಯಾಸಂಗ ಮಾಡಿದವರು ಕೂಡ ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸಂಸ್ಕಾರರಹಿತ ಶಿಕ್ಷಣವೇ ಕಾರಣವಾಗಿದೆ’ ಎಂದು ಅವರು ವಿವರಿಸಿದರು. ವಿವೇಕಾನಂದ ಪದವಿ ಪೂರ್ವ ವಿದ್ಯಾಲಯದ ಆತಿಥ್ಯದಲ್ಲಿ ‘ವಿದ್ಯಾಭಾರತಿ ಕರ್ನಾಟಕ’ದ ವತಿಯಂದ ಹಮ್ಮಿಕೊಳ್ಳಲಾದ ಶಿಕ್ಷಕ ಶಿಕ್ಷಕೇತರರ ಶೈಕ್ಷಣಿಕ ಸಹಮಿಲನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಲೇಜು ಸಂಚಾಲಕರಾದ ಜಯರಾಮ ಭಟ್ ಎಂ. ಟಿ. ಅವರು ಅಧ್ಯಕ್ಷತೆ ವಹಿಸಿದ್ದರು. ವಿದ್ಯಾಭಾರತಿಯ ಜಿಲ್ಲಾ ಉಪಾಧ್ಯಕ್ಷ ಮಂಕುಡೆ ವೆಂಕಟ್ರಮಣರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲೆಯ 500 ಕ್ಕೂ ಅಧಿಕ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ವಿವೇಕಾನಂದ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡ ಸಮಾರಂಭದಲ್ಲಿ ವಿದ್ಯಾಭಾರತಿ ಕರ್ನಾಟಕ ಘಟಕದ ಸಹಕಾರ್ಯದರ್ಶಿ ವಸಂತ ಮಾಧವ ಅವರು ಪ್ರಸ್ತಾವನೆ ಮಾಡಿ, ಸ್ವಾಗತಿಸಿದರು. ಪ್ರಾಂಶುಪಾಲರಾದ ಜೀವನ್ದಾಸ್ ಅವರು ವಂದಿಸಿದರು. ಉಪನ್ಯಾಸಕಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.
ಕಜಂಪಾಡಿ ಸುಬ್ರಹ್ಮಣ್ಯ ಭಟ್, ಲೀಲಾ ಉಪಾಧ್ಯಾಯ, ಪ್ರದೀಪ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.