ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ 2016-17

ನಿರಂತರ ಮತ್ತು ಕಠಿಣ ಪ್ರಯತ್ನದಿಂದ ಮಾತ್ರ ಕ್ರೀಡೆಯಲ್ಲಿ ಸಾಧನೆ ಮಾಡಲು ಸಾಧ್ಯ. ಸೋಲು ಕೊನೆಯಲ್ಲ. ಸೋಲೇ ಗೆಲುವಿನ ಸೋಪಾನ ಎಂದು ರಾಷ್ಟ್ರೀಯ ಅಥ್ಲೀಟ್ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಶ್ರೀ ಆನಂದ ಶೆಟ್ಟಿ ತಿಳಿಸಿದರು.

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಘಟಕ ಮತ್ತು ವಿವೇಕಾನಂದ ಪದವಿ ಪೂರ್ವ ಕಾಲೇಜು, ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯ ಮಹತ್ವವನ್ನು ಅವರು ವಿವರಿಸಿದರು.

DSC_0817

ಅಧ್ಯಕ್ಷರಾಗಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ರವಿ ಮುಂಗ್ಲಿಮನೆ ಮಾತನಾಡಿ ಕ್ರೀಡೆಯಿಂದ ಶಿಸ್ತು, ಸಂಯಮ ಮತ್ತು ಆರೋಗ್ಯ ವೃದ್ಧಿಸುತ್ತದೆ ಎಂದು ಕಿವಿಮಾತು ಹೇಳಿದರು.

ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಉಪಾಧ್ಯಕ್ಷರಾದ ಶ್ರೀ ವೆಂಕಟರಮಣ ರಾವ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜೀವನ್‌ದಾಸ್ ಇವರು ಅತಿಥಿಗಳನ್ನು ಸ್ವಾಗತಿಸಿದರು.

ಸಮಾರಂಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಶ್ರೀ ಸಂತೋಷ್ ಬಿ, ಅಭ್ಯಾಗತರಾಗಿ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀ ಕೃಷ್ಣನಾರಾಯಣ ಮುಳಿಯ, ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇದರ ಕಾರ್ಯದರ್ಶಿಗಳಾದ ಶ್ರೀ ಲೋಕಯ್ಯ ಡಿ. ಇವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಪರಮೇಶ್ವರ ಶರ್ಮ ನಿರೂಪಿಸಿದರು. ಶ್ರೀ ಕರುಣಾಕರ ಎಂ., ದ್ಯೆ.ಶಿ.ಪ್ರಮುಖ್ ,ವಿದ್ಯಾಭಾರತಿ ದ.ಕ ಇವರು ವಂದಿಸಿದರು.

Highslide for Wordpress Plugin